John 13:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೂದನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಕುಮಾರನಿಗೆ ಮಹಿಮೆಯಾಗುವುದು. ಅಲ್ಲದೆ, ಮನುಷ್ಯಕುಮಾರನ ಮೂಲಕ ದೇವರಿಗೂ ಮಹಿಮೆಯಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.
Kannada BSI Bible 2016
ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹೊರಗೆ ಹೋದ ಮೇಲೆ ಯೇಸು - ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ, ಮತ್ತು ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
Kannada Bible (KNCL) BSI 2016
ಯೂದನು ಹೊರಟುಹೋದಮೇಲೆ ಯೇಸು ಸ್ವಾಮಿ ಹೀಗೆಂದರು: “ಈಗ ನರಪುತ್ರನ ಮಹಿಮೆ ಪ್ರಕಟವಾಗುವುದು. ಆತನಲ್ಲಿ ದೇವರ ಮಹಿಮೆಯೂ ಪ್ರಕಟವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಪುತ್ರನಾದ ನಾನು ಮಹಿಮೆ ಹೊಂದಲಿದ್ದೇನೆ. ದೇವರೂ ನನ್ನಲ್ಲಿ ಮಹಿಮೆ ಹೊಂದುವರು.