John 13:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನನ್ನ ಮಕ್ಕಳೇ, ಇನ್ನು ಸ್ವಲ್ಪ ಸಮಯ ಮಾತ್ರ ನಾನು ನಿಮ್ಮೊಂದಿಗೆ ಇರುತ್ತೇನೆ. ನೀವು ನನಗಾಗಿ ಹುಡುಕುವಿರಿ. ನಾನು ಯೆಹೂದ್ಯರಿಗೆ ಹೇಳಿದ್ದನ್ನು ನಿಮಗೂ ಹೇಳುತ್ತೇನೆ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
Kannada BSI Bible 2016
ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಿಯ ಮಕ್ಕಳೇ, ಇನ್ನು ಸ್ವಲ್ಪಕಾಲವೇ ನಿಮ್ಮ ಸಂಗಡ ಇರುತ್ತೇನೆ. ನನ್ನನ್ನು ಹುಡುಕುವಿರಿ, ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆ ಈಗ ನಿಮಗೂ ಹೇಳುತ್ತೇನೆ.
Kannada Bible (KNCL) BSI 2016
ಪ್ರಿಯ ಮಕ್ಕಳೇ, ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ, ಆಮೇಲೆ ನೀವು ನನ್ನನ್ನು ಹುಡುಕುವಿರಿ, ‘ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮೊಡನೆ ಇರುತ್ತೇನೆ. ‘ನೀವು ನನ್ನನ್ನು ಹುಡುಕುವಿರಿ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದಿ ನಾಯಕರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.