John 13:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.
Kannada BSI Bible 2016
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ; ಏನಂದರೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು; ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬದೇ.
Kannada Bible (KNCL) BSI 2016
ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.