John 13:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ನೀವೂ ನನ್ನ ಶಿಷ್ಯರೆಂಬುದನ್ನು ಎಲ್ಲಾ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು.
Kannada BSI Bible 2016
ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮೊಳಗೆ ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳುಕೊಳ್ಳುವರು ಅಂದನು.
Kannada Bible (KNCL) BSI 2016
ನಿಮ್ಮ ಈ ಪರಸ್ಪರ ಪ್ರೀತಿಯನ್ನು ಕಂಡು ನೀವು ನನ್ನ ಶಿಷ್ಯರೆಂದು ಜನರೆಲ್ಲರೂ ಅರಿತುಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ಪರಸ್ಪರ ಪ್ರೀತಿಯಿದ್ದರೆ, ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು,” ಎಂದು ಹೇಳಿದರು.