John 13:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಯೇಸು, “ನಾನು ಹೋಗುವಲ್ಲಿಗೆ ಈಗ ನೀನು ಹಿಂಬಾಲಿಸಿಕೊಂಡು ಬರಲಾರೆ. ಆದರೆ ಮುಂದೆ ನೀನು ಹಿಂಬಾಲಿಸಿಕೊಂಡು ಬರುವೆ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, “ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ” ಎಂದನು.
Kannada BSI Bible 2016
ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೀಮೋನ ಪೇತ್ರನು ಆತನನ್ನು - ಸ್ವಾಮೀ, ಎಲ್ಲಿಗೆ ಹೋಗುತ್ತೀ? ಎಂದು ಕೇಳಿದ್ದಕ್ಕೆ ಯೇಸು - ನಾನು ಹೋಗುವಲ್ಲಿಗೆ ನೀನು ಈಗ ನನ್ನ ಹಿಂದೆ ಬರಲಾರಿ, ತರುವಾಯ ನನ್ನ ಹಿಂದೆ ಬರುವಿ ಅಂದನು.
Kannada Bible (KNCL) BSI 2016
ಆಗ ಸಿಮೋನ ಪೇತ್ರನು, “ಪ್ರಭುವೇ, ನೀವು ಹೋಗುವುದಾದರೂ ಎಲ್ಲಿಗೆ?” ಎಂದು ಕೇಳಿದನು. “ನಾನು ಹೋಗುವಲ್ಲಿಗೆ ನೀನು ಈಗ ಬರಲಾರೆ. ಅನಂತರ ಬರುವೆ,” ಎಂದು ಯೇಸು ಉತ್ತರಕೊಡಲು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೀಮೋನ ಪೇತ್ರನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರಿ?” ಎಂದು ಕೇಳಿದ್ದಕ್ಕೆ, ಯೇಸು ಅವನಿಗೆ, “ನಾನು ಹೋಗುವ ಕಡೆಗೆ ಈಗ ನೀನು ನನ್ನನ್ನು ಹಿಂಬಾಲಿಸಲಾರೆ, ನಂತರ ಹಿಂಬಾಲಿಸುವೆ,” ಎಂದರು.