John 13:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೇತ್ರನು, “ಪ್ರಭುವೇ, ಈಗ ನಾನು ನಿನ್ನನ್ನು ಹಿಂಬಾಲಿಸಲು ಏಕಾಗದು? ನಿನಗೋಸ್ಕರ ಸಾಯುವುದಕ್ಕೂ ನನಗೆ ಮನಸ್ಸಿದೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು.
Kannada BSI Bible 2016
ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರನು ಆತನಿಗೆ - ಸ್ವಾಮೀ, ನಾನು ಯಾಕೆ ಈಗ ನಿನ್ನ ಹಿಂದೆ ಬರಲಾರೆನು? ನಿನಗಾಗಿ ನನ್ನ ಪ್ರಾಣವನ್ನಾದರೂ ಕೊಟ್ಟೇನು ಎಂದು ಹೇಳಲು
Kannada Bible (KNCL) BSI 2016
ಪೇತ್ರನು, “ಈಗಲೇ ನಿಮ್ಮ ಹಿಂದೆಬರಲು ಏಕಾಗದು? ಪ್ರಭೂ, ನಿಮಗಾಗಿ ಪ್ರಾಣವನ್ನು ಕೊಡಲೂ ಸಿದ್ಧನಿದ್ದೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ಯೇಸುವಿಗೆ, “ಕರ್ತದೇವರೇ, ನಾನು ಈಗ ನಿಮ್ಮನ್ನು ಏಕೆ ಹಿಂಬಾಲಿಸಲಾರೆನು? ನಿಮಗಾಗಿ ನನ್ನ ಪ್ರಾಣವನ್ನೇ ಕೊಡುವೆನು,” ಎಂದನು.