John 13:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವೆಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ” ಎಂದನು.
Kannada BSI Bible 2016
ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು - ನನಗಾಗಿ ಪ್ರಾಣ ಕೊಟ್ಟೀಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನ ವಿಷಯದಲ್ಲಿ ಅವನನ್ನು ಅರಿಯೆನೆಂದು ಮೂರು ಸಾರಿ ಹೇಳುವ ತನಕ ಕೋಳಿ ಕೂಗುವದೇ ಇಲ್ಲ ಅಂದನು.
Kannada Bible (KNCL) BSI 2016
ಆಗ ಯೇಸು, “ನನಗಾಗಿ ಪ್ರಾಣವನ್ನುಕೊಡಲು ಸಿದ್ಧನಿರುವೆಯಾ? ನಾನು ನಿನಗೆ ನಿಜವಾಗಿ ಹೇಳುತ್ತೇನೆ ಕೇಳು: ನೀನು ನನ್ನನ್ನು ಅರಿಯೆನೆಂದು ಮೂರುಬಾರಿ ತಿರಸ್ಕರಿಸುವ ತನಕ ನಾಳೆ ಮುಂಜಾನೆ ಕೋಳಿ ಕೂಗುವುದಿಲ್ಲ,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ನೀನು ನನಗಾಗಿ ನಿನ್ನ ಪ್ರಾಣವನ್ನೇ ಕೊಡುವೆಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಹುಂಜ ಕೂಗುವುದೇ ಇಲ್ಲ,” ಎಂದರು.