John 13:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಊಟಮಾಡುತ್ತಿದ್ದಾಗ ಯೇಸು ಎದ್ದು ತನ್ನ ಮೇಲಂಗಿಯನ್ನು ತೆಗೆದಿಟ್ಟನು; ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು.
Kannada BSI Bible 2016
ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊದ್ದಿದ್ದ ಮೇಲ್ಹೊದಿಕೆಯನ್ನು ತೆಗೆದಿಟ್ಟು ಕೈಪಾವುಡವನ್ನು ತಕ್ಕೊಂಡು ನಡುವಿಗೆ ಕಟ್ಟಿಕೊಂಡನು.
Kannada Bible (KNCL) BSI 2016
ಅವರು ಊಟದಿಂದ ಎದ್ದು, ತಮ್ಮ ಮೇಲುಹೊದಿಕೆಯನ್ನು ತೆಗೆದಿಟ್ಟರು. ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಊಟದಿಂದೆದ್ದು ತಮ್ಮ ಮೇಲು ಹೊದಿಕೆಯನ್ನು ತೆಗೆದಿಟ್ಟು ಅಂಗವಸ್ತ್ರವನ್ನು ತೆಗೆದುಕೊಂಡು ಸೊಂಟಕ್ಕೆ ಕಟ್ಟಿಕೊಂಡರು.