John 13:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ಶಿಷ್ಯರ ಕಾಲುಗಳನ್ನು ತೊಳೆದು ತಾನು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಅವರ ಪಾದಗಳನ್ನು ಒರಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.
Kannada BSI Bible 2016
ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ನಡುವಿಗೆ ಕಟ್ಟಿಕೊಂಡಿದ್ದ ಕೈಪಾವುಡದಿಂದ ಒರಸುವದಕ್ಕೂ ಪ್ರಾರಂಭಿಸಿದನು.
Kannada Bible (KNCL) BSI 2016
ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ತಮ್ಮ ಶಿಷ್ಯರ ಕಾಲುಗಳನ್ನು ತೊಳೆಯುತ್ತಾ ತಾವು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಒರಸತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅವರು ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುವುದಕ್ಕೂ ತಾವು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರೆಸುವುದಕ್ಕೂ ಪ್ರಾರಂಭಿಸಿದರು.