John 13:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಸೀಮೋನ್ ಪೇತ್ರನ ಬಳಿಗೆ ಬಂದಾಗ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ನೀನು ತೊಳೆಯಕೂಡದು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು.
Kannada BSI Bible 2016
ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಸೀಮೋನ ಪೇತ್ರನ ಬಳಿಗೆ ಬರಲು ಇವನು ಆತನಿಗೆ - ಸ್ವಾಮೀ, ನೀನು ನನ್ನ ಕಾಲುಗಳನ್ನು ತೊಳೆಯಬೇಕೇ? ಎಂದು ಹೇಳಿದನು.
Kannada Bible (KNCL) BSI 2016
ಹೀಗೆ, ಅವರು ಸಿಮೋನ ಪೇತ್ರನ ಹತ್ತಿರಕ್ಕೆ ಬಂದಾಗ ಆತ, “ಪ್ರಭುವೇ, ನೀವು ನನ್ನ ಕಾಲುಗಳನ್ನು ತೊಳೆಯುವುದೇ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಯೇಸುವಿಗೆ, “ಸ್ವಾಮೀ, ನೀವು ನನ್ನ ಪಾದಗಳನ್ನು ತೊಳೆಯುತ್ತೀರೋ?” ಎಂದು ಕೇಳಿದನು.