John 13:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು. ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.
Kannada BSI Bible 2016
ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರನು - ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಎಂದು ಹೇಳಿದ್ದಕ್ಕೆ ಯೇಸು - ನಾನು ನಿನ್ನನ್ನು ತೊಳೆಯದಿದ್ದರೆ ನನ್ನ ಸಂಗಡ ನಿನಗೆ ಪಾಲಿಲ್ಲ ಅಂದನು.
Kannada Bible (KNCL) BSI 2016
“ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ಯೇಸುವಿಗೆ, “ನೀವು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು,” ಎಂದನು. ಯೇಸು ಅವನಿಗೆ, “ನಾನು ನಿನ್ನ ಪಾದಗಳನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇಲ್ಲ,” ಎಂದು ಹೇಳಿದರು.