John 14:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂದು ನೀವು ನಿಜವಾಗಿಯೂ ನಂಬುವಿರಾ? ನಾನು ನಿಮಗೆ ಹೇಳುವ ಸಂಗತಿಗಳು ನನ್ನಿಂದಲೇ ಬಂದಂಥವುಗಳಲ್ಲ. ತಂದೆಯು ನನ್ನಲ್ಲಿ ವಾಸವಾಗಿದ್ದಾನೆ ಮತ್ತು ಆತನು ತನ್ನ ಕಾರ್ಯವನ್ನು ಮಾಡುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.
Kannada BSI Bible 2016
ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ತಂದೆಯಲ್ಲಿದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕ್ರಿಯೆಗಳನ್ನು ನಡಿಸುತ್ತಾನೆ.
Kannada Bible (KNCL) BSI 2016
ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾರೆ ಎಂದು ನೀನು ನಂಬುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವುದಿಲ್ಲ; ನನ್ನಲ್ಲಿರುವ ತಂದೆಯೇ ತಮ್ಮ ಕ್ರಿಯೆಗಳನ್ನು ಮಾಡುತ್ತಾರೆ.