John 14:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂಬ ನನ್ನ ಮಾತನ್ನು ನಂಬಿರಿ. ಇಲ್ಲದಿದ್ದರೆ ನಾನು ಮಾಡಿದ ಅದ್ಭುತಕಾರ್ಯಗಳ ನಿಮಿತ್ತವಾದರೂ ನಂಬಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.
Kannada BSI Bible 2016
ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ತಂದೆಯಲ್ಲಿ ಇದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆಂಬುವ ನನ್ನ ಮಾತನ್ನು ನಂಬಿರಿ; ಇಲ್ಲದಿದ್ದರೆ ಆ ಕ್ರಿಯೆಗಳನ್ನೇ ನೋಡಿ ನನ್ನ ಮಾತನ್ನು ನಂಬಿರಿ.
Kannada Bible (KNCL) BSI 2016
‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ತಂದೆಯಲ್ಲಿಯೂ ತಂದೆಯು ನನ್ನಲ್ಲಿಯೂ ಇದ್ದಾರೆಂದು ಹೇಳುವಾಗ ನೀವು ನನ್ನನ್ನು ನಂಬಿರಿ, ಇಲ್ಲದಿದ್ದರೆ ಆ ಕ್ರಿಯೆಗಳನ್ನಾದರೂ ನೀವು ನಂಬಿರಿ.