John 14:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನಲ್ಲಿ ನಂಬಿಕೆ ಇಡುವ ವ್ಯಕ್ತಿಯು ನಾನು ಮಾಡಿದ ಕಾರ್ಯಗಳನ್ನೇ ಮಾಡುವನು. ಹೌದು ನಾನು ಮಾಡುವ ಕಾರ್ಯಗಳಿಗಿಂತಲೂ ದೊಡ್ಡಕಾರ್ಯಗಳನ್ನು ಅವನು ಮಾಡುವನು. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.
Kannada BSI Bible 2016
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.
Kannada Bible (KNCL) BSI 2016
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಾನು ಮಾಡುವ ಕ್ರಿಯೆಗಳನ್ನು ತಾವು ಸಹ ಮಾಡುವರು. ಇವುಗಳಿಗಿಂತ ಮಹತ್ತಾದವುಗಳನ್ನು ಅವರು ಮಾಡುವರು. ಏಕೆಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.