John 14:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮತ್ತು ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ನಿಮಗೋಸ್ಕರ ಅದನ್ನು ನೆರವೇರಿಸುವೆನು. ಆಗ ಮಗನ ಮೂಲಕವಾಗಿ ತಂದೆಗೆ ಮಹಿಮೆ ಆಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.
Kannada BSI Bible 2016
ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು.
Kannada Bible (KNCL) BSI 2016
ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.