John 14:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ., ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.
Kannada BSI Bible 2016
ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.
Kannada Bible (KNCL) BSI 2016
ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು.