John 14:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನ ತಂದೆಯಲ್ಲಿರುವುದನ್ನು ನೀವು ಆ ದಿನದಂದು ತಿಳಿದುಕೊಳ್ಳುವಿರಿ. ನೀವು ನನ್ನಲ್ಲಿರುವುದನ್ನೂ ನಾನು ನಿಮ್ಮಲ್ಲಿರುವುದನ್ನೂ ತಿಳಿದುಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.
Kannada BSI Bible 2016
ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.
Kannada Bible (KNCL) BSI 2016
ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.