John 14:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.
Kannada BSI Bible 2016
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು.
Kannada Bible (KNCL) BSI 2016
ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು,” ಎಂದು ಹೇಳಿದರು.