John 14:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೂದನು (ಇಸ್ಕರಿಯೋತ ಯೂದನಲ್ಲ), “ಪ್ರಭುವೇ, ನೀನು ನಿನ್ನನ್ನು ಈ ಲೋಕಕ್ಕೆ ತೋರ್ಪಡಿಸಿಕೊಳ್ಳದೆ ನಮಗೆ ಮಾತ್ರ ತೋರ್ಪಡಿಸಿಕೊಳ್ಳಬೇಕೆಂದಿರುವುದೇಕೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು.
Kannada BSI Bible 2016
ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೂದನು (ಇವನು ಇಸ್ಕರಿಯೋತನಲ್ಲ) - ಸ್ವಾಮೀ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವದಕ್ಕೆ ಏನು ಸಂಭವಿಸಿತು ಎಂದು ಕೇಳಿದ್ದಕ್ಕೆ
Kannada Bible (KNCL) BSI 2016
ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ಕರಿಯೋತ ಅಲ್ಲದ ಮತ್ತೊಬ್ಬ ಯೂದನು, “ಸ್ವಾಮೀ, ನೀವು ಲೋಕಕ್ಕೆ ಪ್ರಕಟವಾಗದೆ ನಮಗೆ ಮಾತ್ರ ಪ್ರಕಟವಾಗುವುದು ಏಕೆ?” ಎಂದು ಕೇಳಿದನು.

Recommended Reading