John 14:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.
Kannada BSI Bible 2016
ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.
Kannada Bible (KNCL) BSI 2016
ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.