John 14:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನನ್ನನ್ನು ಪ್ರೀತಿಸದವನು, ನನ್ನ ಉಪದೇಶಕ್ಕೆ ವಿಧೇಯನಾಗುವುದಿಲ್ಲ. ನೀವು ಕೇಳುತ್ತಿರುವ ಈ ಉಪದೇಶವು ನಿಜವಾಗಿಯೂ ನನ್ನದಲ್ಲ, ನನ್ನನ್ನು ಕಳುಹಿಸಿರುವ ನನ್ನ ತಂದೆಯದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
Kannada BSI Bible 2016
ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತುಗಳನ್ನು ಕೈಕೊಂಡು ನಡೆಯುವದಿಲ್ಲ; ನೀವು ಆಲಿಸುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯ ಮಾತೇ.
Kannada Bible (KNCL) BSI 2016
ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ಪಿತನದೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಪ್ರೀತಿಸದವನು ನನ್ನ ವಾಕ್ಯಗಳನ್ನು ಕೈಗೊಳ್ಳುವುದಿಲ್ಲ. ನೀವು ಕೇಳಿದ ವಾಕ್ಯವು ನನ್ನ ವಾಕ್ಯಗಳಲ್ಲ. ಅವು ನನ್ನನ್ನು ಕಳುಹಿಸಿದ ನನ್ನ ತಂದೆಯ ವಾಕ್ಯಗಳಾಗಿವೆ.