John 14:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ನಾನು ಹೊರಟುಹೋಗುತ್ತೇನೆ. ಆದರೆ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇನೆ’ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ತಂದೆಯ ಬಳಿಗೆ ಮರಳಿಹೋಗುವುದರ ಬಗ್ಗೆ ಸಂತೋಷಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.
Kannada BSI Bible 2016
ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ನಿಮಗೆ ಹೇಳಿದ್ದನ್ನು ಕೇಳಿದಿರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುವ ವಿಷಯದಲ್ಲಿ ಸಂತೋಷಪಡುತ್ತಿದ್ದಿರಿ; ಯಾಕಂದರೆ ತಂದೆಯು ನನಗಿಂತ ದೊಡ್ಡವನು.
Kannada Bible (KNCL) BSI 2016
ನಾನು ಹೊರಟುಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಾನು ಹೋಗಿ ತಿರುಗಿ ನಿಮ್ಮ ಬಳಿಗೆ ಬರುತ್ತೇನೆ,’ ಎಂದು ನಾನು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷ ಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವರು.