John 14:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
Kannada BSI Bible 2016
ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು.
Kannada Bible (KNCL) BSI 2016
ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.