John 14:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.
Kannada BSI Bible 2016
ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ನಾನು ನಿಮ್ಮ ಸಂಗಡ ಬಹಳ ಮಾತುಗಳನ್ನಾಡುವದಿಲ್ಲ, ಯಾಕಂದರೆ ಇಹಲೋಕಾಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ಯಾವದೊಂದೂ ನನ್ನಲ್ಲಿಲ್ಲ;
Kannada Bible (KNCL) BSI 2016
ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.