John 14:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆ ಎಂಬುದನ್ನು ಈ ಲೋಕವು ತಿಳಿದುಕೊಳ್ಳಬೇಕು. ಆದ್ದರಿಂದ ತಂದೆಯು ನನಗೆ ಹೇಳಿರುವುದನ್ನೇ ನಾನು ಮಾಡುತ್ತೇನೆ. “ಬನ್ನಿ, ನಾವು ಇಲ್ಲಿಂದ ಹೋಗೋಣ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು.
Kannada BSI Bible 2016
ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂಬದು ಲೋಕಕ್ಕೆ ತಿಳಿದಿರಬೇಕೆಂದು ತಂದೆಯು ನನಗೆ ಕೊಟ್ಟ ಆಜ್ಞೆಯ ಮೇರೆಗೆ ಇದನ್ನು ಮಾಡುತ್ತೇನೆ. ಏಳಿರಿ, ಇಲ್ಲಿಂದ ಹೋಗೋಣ.
Kannada Bible (KNCL) BSI 2016
ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು. ಏಳಿ, ಇಲ್ಲಿಂದ ಹೋಗೋಣ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕವು ತಿಳಿಯುವಂತೆ ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. “ಏಳಿರಿ, ನಾವು ಇಲ್ಲಿಂದ ಹೋಗೋಣ,” ಎಂದರು.