John 14:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತೋಮನು ಯೇಸುವಿಗೆ, “ಪ್ರಭುವೇ, ನೀನು ಹೋಗುತ್ತಿರುವುದು ಎಲ್ಲಿಗೆಂಬುದೇ ನಮಗೆ ಗೊತ್ತಿಲ್ಲ. ಹೀಗಿರಲು, ಆ ದಾರಿಯನ್ನು ನಾವು ಹೇಗೆ ತಿಳಿದುಕೊಳ್ಳಲಾದೀತು?” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,
Kannada BSI Bible 2016
ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೋಮನು ಆತನನ್ನು - ಸ್ವಾಮೀ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ಮಾರ್ಗವು ಹೇಗೆ ತಿಳಿದೀತು ಎಂದು ಕೇಳಲು
Kannada Bible (KNCL) BSI 2016
ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ತೋಮನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರೋ ನಮಗೆ ತಿಳಿಯದು. ಆದ್ದರಿಂದ ನಮಗೆ ಮಾರ್ಗವು ಹೇಗೆ ತಿಳಿದೀತು?” ಎಂದನು.

Recommended Reading