John 14:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನನ್ನನ್ನು ನಿಜವಾಗಿಯೂ ತಿಳಿದಿದ್ದರೆ, ನನ್ನ ತಂದೆಯನ್ನು ಸಹ ತಿಳಿದುಕೊಳ್ಳುತ್ತಿದ್ದಿರಿ. ಆದರೆ ಈಗ ನೀವು ತಂದೆಯನ್ನು ತಿಳಿದಿದ್ದೀರಿ. ನೀವು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
Kannada BSI Bible 2016
ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನ್ನನ್ನು ಅರಿತಿದ್ದರೆ ನನ್ನ ತಂದೆಯನ್ನೂ ಅರಿಯುತ್ತಿದ್ದಿರಿ; ಈಗಿನಿಂದ ಆತನನ್ನು ಅರಿತುಕೊಂಡಿದ್ದೀರಿ; ಆತನನ್ನು ನೋಡಿದ್ದೀರಲ್ಲಾ ಎಂದು ಹೇಳಿದನು.
Kannada Bible (KNCL) BSI 2016
ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿಯುತ್ತಿದ್ದೀರಿ. ಈಗಿನಿಂದ ನೀವು ತಂದೆಯನ್ನು ತಿಳಿದಿದ್ದೀರಿ ಮತ್ತು ಅವರನ್ನು ಕಂಡಿದ್ದೀರಿ,” ಎಂದು ಹೇಳಿದರು.