John 14:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ‘ತಂದೆಯನ್ನು ನಮಗೆ ತೋರಿಸು’ ಎಂದು ಏಕೆ ಕೇಳುವಿರಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?
Kannada BSI Bible 2016
ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನಿಗೆ - ಫಿಲಿಪ್ಪನೇ, ನಾನು ಇಷ್ಟು ದಿವಸ ನಿಮ್ಮ ಸಂಗಡ ಇದ್ದರೂ ನೀನು ಇನ್ನೂ ನನ್ನನ್ನು ಅರಿತುಕೊಳ್ಳಲಿಲ್ಲವೇ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ನಮಗೆ ತಂದೆಯನ್ನು ತೋರಿಸೆಂದು ನೀನು ಹೇಳುವದು ಹೇಗೆ?
Kannada Bible (KNCL) BSI 2016
ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟುಕಾಲ ನಿಮ್ಮೊಂದಿಗೆ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ಹಾಗಾದರೆ, ‘ತಂದೆಯನ್ನು ನಮಗೆ ತೋರಿಸಿರಿ’ ಎಂದು ನೀನು ಕೇಳುವುದು ಹೇಗೆ?