John 15:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
Kannada BSI Bible 2016
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ನಡೆದು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಮೇರೆಗೆ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
Kannada Bible (KNCL) BSI 2016
ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.