John 15:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.
Kannada BSI Bible 2016
ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.
Kannada Bible (KNCL) BSI 2016
ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.