John 15:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.
Kannada BSI Bible 2016
ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ.
Kannada Bible (KNCL) BSI 2016
ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.