John 15:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಬಂದು ಈ ಲೋಕದ ಜನರೊಂದಿಗೆ ಮಾತಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ನಾನು ಅವರೊಂದಿಗೆ ಮಾತಾಡಿದ್ದೇನೆ. ಆದ್ದರಿಂದ ತಮ್ಮ ಪಾಪಕ್ಕೆ ಅವರಿಗೆ ಯಾವ ನೆವವೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.
Kannada BSI Bible 2016
ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬಂದು ಅವರ ಕೂಡ ಮಾತಾಡದಿದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಅವರು ಮಾಡಿದ ಪಾಪಕ್ಕಾಗಿ ಅವರಿಗೆ ಈಗ ನೆವವಿಲ್ಲ.
Kannada Bible (KNCL) BSI 2016
ನಾನು ಬಂದು ಅವರಿಗೆ ಬೋಧನೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳು ಎಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ಅವರ ದೋಷಕ್ಕೆ ಯಾವ ನೆಪವನ್ನೂ ಒಡ್ಡುವಂತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬಂದು ಅವರೊಂದಿಗೆ ಮಾತನಾಡದಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರ ಪಾಪದ ವಿಷಯವಾಗಿ ಅವರಿಗೆ ನೆಪವಿಲ್ಲ.