John 15:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ
Kannada BSI Bible 2016
ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತಾರೂ ನಡಿಸದ ಕ್ರಿಯೆಗಳನ್ನು ನಾನು ಅವರಲ್ಲಿ ನಡಿಸದೆ ಇದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರು ನೋಡಿದ್ದಾರೆ, ಆದರೂ ನನ್ನ ಮೇಲೆಯೂ ನನ್ನ ತಂದೆಯ ಮೇಲೆಯೂ ದ್ವೇಷಮಾಡಿದ್ದಾರೆ.
Kannada Bible (KNCL) BSI 2016
ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.