John 15:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ತಂದೆಯ ಬಳಿಯಿಂದ ಸಹಾಯಕನನ್ನು ನಿಮಗೆ ಕಳುಹಿಸಿಕೊಡುವೆನು. ತಂದೆಯ ಬಳಿಯಿಂದ ಬರುವ ಆ ಸಹಾಯಕನು ಸತ್ಯದ ಆತ್ಮನಾಗಿದ್ದಾನೆ. ಆತನು ಬಂದಾಗ ನನ್ನ ಬಗ್ಗೆ ನಿಮಗೆ ತಿಳಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.
Kannada BSI Bible 2016
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು, ಬಂದಾಗ ಆತನು ನನ್ನನ್ನು ಕುರಿತು ಸಾಕ್ಷಿಹೇಳುವನು.
Kannada Bible (KNCL) BSI 2016
ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.