John 15:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಯಾವ ಕವಲೂ ತನ್ನಷ್ಟಕ್ಕೆ ತಾನೇ ಫಲಕೊಡಲಾರದು. ಅದು ದ್ರಾಕ್ಷಿಬಳ್ಳಿಯಲ್ಲಿ ನೆಲೆಗೊಂಡಿರಬೇಕು. ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮಷ್ಟಕ್ಕೇ ಫಲಕೊಡಲಾರಿರಿ. ನೀವು ನನ್ನಲ್ಲಿ ನೆಲೆಗೊಂಡಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
Kannada BSI Bible 2016
ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನ್ನಲ್ಲಿ ನೆಲೆಗೊಂಡಿರ್ರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲಕೊಡಲಾರದೋ ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
Kannada Bible (KNCL) BSI 2016
ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮಲ್ಲಿ ನೆಲೆಗೊಂಡಿರುವ ಹಾಗೇ ನನ್ನಲ್ಲಿ ನೆಲೆಗೊಂಡಿರಿ. ಕವಲುಬಳ್ಳಿಯು ದ್ರಾಕ್ಷಿಯ ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.