John 15:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.
Kannada BSI Bible 2016
ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ದ್ರಾಕ್ಷೇ ಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನೇ ಬಹಳ ಫಲಕೊಡುವನು; ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.
Kannada Bible (KNCL) BSI 2016
“ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.