John 15:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.
Kannada BSI Bible 2016
ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನು ನನ್ನಲ್ಲಿ ನೆಲೆಗೊಂಡಿರುವದಿಲ್ಲವೋ ಅವನು ಆ ಕೊಂಬೆಯಂತೆ ಹೊರಕ್ಕೆ ಬಿಸಾಡಲ್ಪಟ್ಟು ಒಣಗಿಹೋಗುವನು; ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುತ್ತಾರೆ, ಅವು ಸುಟ್ಟುಹೋಗುತ್ತವೆ.
Kannada Bible (KNCL) BSI 2016
ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.