John 16:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ನಿಮಗೆ ತಿಳಿಸಬೇಕಾದ ಇನ್ನೂ ಅನೇಕ ಸಂಗತಿಗಳಿವೆ. ಆದರೆ ಈಗ ಆ ಸಂಗತಿಗಳನ್ನು ಸ್ವೀಕರಿಸಿಕೊಳ್ಳಲು ನಿಮಗೆ ಬಹು ಕಷ್ಟವಾಗಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.
Kannada BSI Bible 2016
ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮಗೆ ಹೇಳಬೇಕಾದದ್ದು ಇನ್ನೂ ಬಹಳ ಉಂಟು; ಆದರೆ ಸದ್ಯಕ್ಕೆ ಅದನ್ನು ಹೊರಲಾರಿರಿ.
Kannada Bible (KNCL) BSI 2016
ನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆ. ಸಧ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ. ಆದರೆ ನೀವು ಈಗ ಅವುಗಳನ್ನು ತಾಳಿಕೊಳ್ಳಲಾರಿರಿ.