John 16:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.
Kannada BSI Bible 2016
ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.
Kannada Bible (KNCL) BSI 2016
ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ನಡೆಸುವರು. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು.