John 16:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯರಲ್ಲಿ ಕೆಲವರು, “‘ಸ್ವಲ್ಪಕಾಲದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ಪಲ್ಪಕಾಲವಾದ ಬಳಿಕ ನನ್ನನ್ನು ಮತ್ತೆ ನೋಡುವಿರಿ. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ’ ಎಂದು ಆತನು ಹೇಳಿದ್ದರ ಅರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಕೇಳಿ ಆತನ ಶಿಷ್ಯರಲ್ಲಿ ಕೆಲವರು, “ಇದೇನು ಈತನು ಹೇಳುವ ಮಾತು? ‘ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ ಮತ್ತು ನಾನು ತಂದೆಯ ಬಳಿಗೆ ಹೋಗುತ್ತೇನೆ’ ಎನ್ನುತ್ತಾನಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು
Kannada BSI Bible 2016
ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಕೇಳಿ ಶಿಷ್ಯರಲ್ಲಿ ಕೆಲವರು - ಇದೇನು ಈತನು ಹೇಳುವ ಮಾತು? ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ, ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅನ್ನುತ್ತಾನೆ; ಮತ್ತು ನಾನು ತಂದೆಯ ಬಳಿಗೆ ಹೋಗುವದರಿಂದ ಅನ್ನುತ್ತಾನೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು -
Kannada Bible (KNCL) BSI 2016
ಇದನ್ನು ಕೇಳಿದ ಕೆಲವು ಮಂದಿ ಶಿಷ್ಯರು, “ಇದೇನು ಇವರು ಹೇಳುತ್ತಿರುವುದು? ‘ತುಸು ಕಾಲವಾದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನೀವು ನನ್ನನ್ನು ಪುನಃ ಕಾಣುವಿರಿ ಮತ್ತು ಪಿತನಲ್ಲಿಗೆ ನಾನು ಹೋಗುತ್ತೇನೆ,’ ಎನ್ನುತ್ತಾರಲ್ಲ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರ ಶಿಷ್ಯರಲ್ಲಿ ಕೆಲವರು, “ಇವರು ನಮಗೆ ಹೇಳುವುದೇನು? ‘ಸ್ವಲ್ಪಕಾಲ ನೀವು ನನ್ನನ್ನು ಕಾಣುವುದಿಲ್ಲ ಮತ್ತು ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ,’ ಎನ್ನುತ್ತಾರಲ್ಲಾ?