John 16:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಿಷ್ಯರು, “‘ಸ್ವಲ್ಪಕಾಲ’ ಎಂದರೇನು? ಆತನ ಮಾತೇ ನಮಗೆ ಅರ್ಥವಾಗುತ್ತಿಲ್ಲ” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಸ್ವಲ್ಪ ಕಾಲವೆಂದು’ ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು” ಎಂದು ಅಂದುಕೊಳ್ಳುತ್ತಿದ್ದರು.
Kannada BSI Bible 2016
ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಲ್ಪಕಾಲವೆಂದು ಈತನು ಹೇಳುವ ಈ ಮಾತೇನು? ಏನು ಮಾತಾಡುತ್ತಾನೋ ನಮಗೆ ತಿಳಿಯದು ಅಂದುಕೊಳ್ಳುತ್ತಿದ್ದರು.
Kannada Bible (KNCL) BSI 2016
‘ತುಸುಕಾಲ’ ಎಂದರೇನು? ಇವರ ಮಾತೇ ನಮಗೆ ಅರ್ಥವಾಗುತ್ತಿಲ್ಲವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಹೇಳುವುದರ ಅರ್ಥವೇನು? ‘ಸ್ವಲ್ಪಕಾಲ’ ಎಂದು ಹೇಳುತ್ತಾರಲ್ಲ? ಇವರು ಏನು ಮಾತನಾಡುತ್ತಾರೋ ನಮಗೆ ತಿಳಿಯದು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.