John 16:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಿಷ್ಯರು ಇದರ ಬಗ್ಗೆ ತನ್ನನ್ನು ಕೇಳಬೇಕೆಂದಿದ್ದಾರೆ ಎಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “‘ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ವಲ್ಪಕಾಲವಾದ ಬಳಿಕ ನನ್ನನ್ನು ನೋಡುವಿರಿ’ ಎಂದು ನಾನು ಹೇಳಿದ್ದರ ಅರ್ಥವೇನೆಂದು ನೀವು ಒಬ್ಬರನ್ನೊಬ್ಬರು ಕೇಳುತ್ತಿದ್ದೀರಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ?
Kannada BSI Bible 2016
ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ - ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ, ಇನ್ನು ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರಾ?
Kannada Bible (KNCL) BSI 2016
ಯೇಸು, ತಮ್ಮಲ್ಲಿ ಅವರು ವಿಚಾರಿಸಬೇಕೆಂದಿದ್ದಾರೆಂದು ತಿಳಿದುಕೊಂಡು, ‘ತುಸುಕಾಲದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ’ ಎಂದು ನಾನು ಹೇಳಿದ್ದನ್ನು ಕುರಿತು ನಿಮ್ಮನಿಮ್ಮಲ್ಲಿಯೇ ನೀವು ಚರ್ಚಿಸುತ್ತಿರುವುದೇನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು ತಮ್ಮ ಬಗ್ಗೆ ಪ್ರಶ್ನಿಸಬಯಸುತ್ತಿದ್ದಾರೆಂದು ತಿಳಿದು ಯೇಸು, “ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ಕಾಣುವುದಿಲ್ಲ, ‘ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ ಎಂದು ನಾನು ನಿಮಗೆ ಹೇಳಿದ್ದರ ಕುರಿತಾಗಿ ನೀವು ಒಬ್ಬರಿಗೊಬ್ಬರು ವಿಚಾರಿಸಿಕೊಳ್ಳುತ್ತೀರೋ?’