John 16:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಕೇಳುವುದಿಲ್ಲ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
Kannada BSI Bible 2016
ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಮಾಡುವದಿಲ್ಲ. ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ತಂದೆಯನ್ನು ಏನಾದರೂ ಬೇಡಿಕೊಂಡರೆ ಅದನ್ನು ಆತನು ನನ್ನ ಹೆಸರಿನ ಮೇಲೆ ನಿಮಗೆ ಕೊಡುವನು.
Kannada Bible (KNCL) BSI 2016
ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ನೀವು ನನ್ನನ್ನು ಏನೂ ಪ್ರಶ್ನಿಸುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.