John 16:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ನಿಮಗೆ ಈ ಸಂಗತಿಗಳನ್ನು ಸಾಮ್ಯಗಳ ರೂಪದಲ್ಲಿ ತಿಳಿಸಿದೆನು. ಆದರೆ ಸಮಯವು ಬರಲಿದೆ. ಆಗ ನಾನು ಸಾಮ್ಯಗಳನ್ನು ಬಳಸದೆ ನನ್ನ ತಂದೆಯ ಬಗ್ಗೆ ಸರಳವಾದ ಮಾತುಗಳಲ್ಲಿ ತಿಳಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ.
Kannada BSI Bible 2016
ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಗತಿಗಳನ್ನು ಗೂಢಾರ್ಥವಾಗಿ ನಿಮಗೆ ಹೇಳಿದ್ದೇನೆ; ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮ ಸಂಗಡ ಮಾತಾಡದೆ ತಂದೆಯ ವಿಷಯದಲ್ಲಿ ಸ್ಪಷ್ಟವಾಗಿ ತಿಳಿಸುವ ಕಾಲ ಬರುತ್ತದೆ.
Kannada Bible (KNCL) BSI 2016
“ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇವುಗಳನ್ನು ನಾನು ಸೂಚಕವಾಗಿ ನಿಮ್ಮೊಡನೆ ಮಾತನಾಡಿದ್ದೇನೆ. ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯವಾಗಿ ನಿಮಗೆ ಸ್ಪಷ್ಟವಾಗಿ ಪ್ರಕಟಿಸುವ ಗಳಿಗೆಯು ಬರುತ್ತದೆ.