John 16:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನಗೆ ಎಲ್ಲಾ ಸಂಗತಿಗಳು ತಿಳಿದಿವೆಯೆಂದು ನಮಗೆ ಈಗ ತಿಳಿಯಿತು. ಒಬ್ಬನು ಪ್ರಶ್ನೆಯನ್ನು ಕೇಳುವುದಕ್ಕಿಂತ ಮೊದಲೇ ನೀನು ಅವನ ಪ್ರಶ್ನೆಗೆ ಉತ್ತರ ಕೊಡಬಲ್ಲೆ. ಇದರಿಂದಾಗಿ, ನೀನು ದೇವರಿಂದ ಬಂದವನೆಂದು ನಾವು ನಂಬುತ್ತೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.
Kannada BSI Bible 2016
ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಸಮಸ್ತವನ್ನು ತಿಳಿದವನೆಂದೂ ನಿನಗೆ ಪ್ರಶ್ನೆಮಾಡಬೇಕಾದ ಅವಶ್ಯವಿಲ್ಲವೆಂದೂ ಈಗ ತಿಳಿಯಿತು; ಇದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೆಂದು ನಂಬುತ್ತೇವೆ ಅಂದದ್ದಕ್ಕೆ
Kannada Bible (KNCL) BSI 2016
ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಎಲ್ಲಾ ತಿಳಿದವರೆಂದೂ ಯಾರೂ ನಿಮ್ಮನ್ನು ಪ್ರಶ್ನಿಸುವುದು ಅಗತ್ಯವಿಲ್ಲವೆಂದು ಈಗ ನಮಗೆ ತಿಳಿಯಿತು. ಆದ್ದರಿಂದ ನೀವು ದೇವರಿಂದ ಹೊರಟು ಬಂದವರೆಂದು ನಾವು ನಂಬುತ್ತೇವೆ,” ಎಂದರು.