John 16:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಹೀಗಿರಲು, ಈ ಸಂಗತಿಗಳೆಲ್ಲಾ ನೆರವೇರುವ ಕಾಲ ಬಂದಾಗ ನನ್ನ ಎಚ್ಚರಿಕೆಯ ಮಾತುಗಳನ್ನು ನೀವು ಜ್ಞಾಪಿಸಿಕೊಳ್ಳುವಿರಿ. “ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಆರಂಭದಲ್ಲೇ ತಿಳಿಸಲಿಲ್ಲ. ಏಕೆಂದರೆ, ಆಗ ನಾನು ನಿಮ್ಮ ಸಂಗಡವಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.
Kannada BSI Bible 2016
ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲ ಬಂದಾಗ ಆತನು ನಮಗೆ ಇಂಥಿಂಥದನ್ನು ಹೇಳಿದನಲ್ಲಾ ಎಂದು ನೀವು ನೆನಪಿಗೆ ತರುವಂತೆ ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.
Kannada Bible (KNCL) BSI 2016
ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರ ಸಮಯ ಬಂದಾಗ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆಂದು ನೀವು ಜ್ಞಾಪಕ ಮಾಡಿಕೊಳ್ಳುವಂತೆ ಮುಂಚಿತವಾಗಿಯೇ ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಇವುಗಳನ್ನು ಪ್ರಾರಂಭದಲ್ಲೇ ನಿಮಗೆ ಹೇಳಲಿಲ್ಲ.