John 16:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನಾನು ಹೋಗುವುದು ನಿಮ್ಮ ಒಳ್ಳೆಯದಕ್ಕಾಗಿಯೇ ಏಕೆಂದರೆ ನಾನು ಹೋಗಿ ಸಹಾಯಕನನ್ನು ನಿಮ್ಮ ಬಳಿಗೆ ಕಳುಹಿಸುವೆನು. ನಾನು ಹೋಗದಿದ್ದರೆ, ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.
Kannada BSI Bible 2016
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ಕೇಳಿರಿ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಹೇಗಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.
Kannada Bible (KNCL) BSI 2016
ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು.