John 16:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸಹಾಯಕನು ಬಂದು ಪಾಪ, ನೀತಿ, ನ್ಯಾಯತೀರ್ಪು ಈ ವಿಷಯಗಳ ಬಗ್ಗೆ ಲೋಕಕ್ಕೆ ತಿಳಿಸಿಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.
Kannada BSI Bible 2016
ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಬಂದು ಪಾಪ ನೀತಿ ನ್ಯಾಯತೀರ್ವಿಕೆ ಈ ವಿಷಯಗಳಲ್ಲಿ ಲೋಕಕ್ಕೆ ಅರುಹನ್ನು ಹುಟ್ಟಿಸುವನು.
Kannada Bible (KNCL) BSI 2016
ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸಹಾಯಕರು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ವಿಷಯಗಳಲ್ಲಿ ಲೋಕದವರಿಗೆ ಮನವರಿಕೆಯನ್ನು ಮಾಡುವರು.