John 17:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಪರಲೋಕದ ಕಡೆಗೆ ನೋಡಿ ಹೀಗೆ ಪ್ರಾರ್ಥಿಸಿದನು: “ತಂದೆಯೇ, ಸಮಯವು ಬಂದಿದೆ. ನಿನ್ನ ಮಗನನ್ನು ಮಹಿಮೆಪಡಿಸು. ಆಗ ಮಗನು ನಿನ್ನನ್ನು ಮಹಿಮೆಪಡಿಸಬಲ್ಲನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.
Kannada BSI Bible 2016
ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
Kannada Bible (KNCL) BSI 2016
ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.