John 17:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.
Kannada BSI Bible 2016
ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ನಾನು ಲೋಕದಲ್ಲಿ ಇರುವದಿಲ್ಲ, ಇವರು ಲೋಕದಲ್ಲಿ ಇರುತ್ತಾರೆ, ನಾನು ನಿನ್ನ ಬಳಿಗೆ ಬರುತ್ತೇನೆ. ಪವಿತ್ರನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಯಬೇಕು.
Kannada Bible (KNCL) BSI 2016
ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ.